ಅಮೃತ ಭಾರತಿ ವಿದ್ಯಾ ಕೇಂದ್ರ ಹೆಬ್ರಿಯಲ್ಲಿ ದಿನಾಂಕ 10.02.2024, ಶನಿವಾರದಂದು ವಿದ್ಯಾರ್ಥಿಗಳ 2023-24ರ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ವೃಂದ ನಾಯಕ್ ಮತ್ತು ಶ್ರೀಮತಿ ರಾಧಿಕ ಅಡಿಗ, ಸಹಾಯಕ ಇಂಜಿನಿಯರ್, ಮೆಸ್ಕಾಂ, ಹೆಬ್ರಿ ಇವರು ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ, “ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅಮೃತ ಭಾರತಿ ಶ್ರಮಿಸುತ್ತಿರುವುದು ನಿಜಕ್ಕೂ ಹೆಮ್ಮೆ” ಎಂದರು.
ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಕಳೆದ ವರ್ಷ ಸಿಬಿಎಸ್ಸಿ (ಕೇಂದ್ರ ಪಠ್ಯಕ್ರಮ) ನಡೆಸಿದ ಹತ್ತನೇ ತರಗತಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳೊಂದಿಗೆ ತೇರ್ಗಡೆಯಾದ ಕು| ಅನನ್ಯ ಕಾಮತ್ ಇವಳನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಅಮೃತ ಭಾರತಿ ವಿದ್ಯಾಕೇಂದ್ರದ ಪ್ರಾಂಶುಪಾಲರಾದ ಅರುಣ್, ಮುಖ್ಯೋಪಾದ್ಯಾಯಿನಿ ಶ್ರೀಮತಿ ಅನಿತಾರವರು ಉಪಸ್ಥಿತರಿದ್ದರು. ಶ್ರೀಮತಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು ಮತ್ತು ಶ್ರೀಮತಿ ಉಷಾಲತಾ ಸ್ವಾಗತಿಸಿ, ಶ್ರೀಮತಿ ಸುಗೀತ ವಂದಿಸಿದರು.