ಅಮೃತ ಭಾರತಿ ಫೌಂಡೇಶನ್‌ ತರಗತಿ ಉದ್ಘಾಟನೆ I ಶಿಕ್ಷಣ ಸಂಸ್ಥೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ

ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಫೌಂಡೇಶನ್ ತರಗತಿಗಳ ಉದ್ಘಾಟನೆ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ದಿವಾಕರ ಮರಕಾಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದೆ ವಿದ್ಯಾರ್ಥಿಗಳಿಗೆ ಮಾಹಿತಿ ಕೊರತೆ ಇತ್ತು. ಇಂದು ಆ ಸನ್ನಿವೇಶ ಇಲ್ಲ. ಆದರೆ ಪ್ರತಿ ಕ್ಷೇತ್ರದಲ್ಲೂ ಕಠಿಣ ಸ್ಪರ್ಧೆ ಇದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಷ್ಟು ತಯಾರಿ ನಡೆಸಿದರೂ ಕಡಿಮೆ. ಆ ನಿಟ್ಟಿನಲ್ಲಿ ಅಮೃತ ಭಾರತಿ ಪ್ರೌಢಶಾಲಾ ಹಂತದಲ್ಲೇ ಸಿಇಟಿ, ನೀಟ್, ಜೆಇಇ ಸ್ಪರ್ಧಾತ್ಮಕ ಪರೀಕ್ಷೆಗಳ ಫೌಂಡೇಶನ್ ತರಗತಿ ಆರಂಭಿಸುತ್ತಿರುವುದು ಹೆಮ್ಮೆಯ ಸಂಗತಿ. ಎಲ್ಲ ವಿದ್ಯಾರ್ಥಿಗಳು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

Leave a Reply